i
ಜ.27 ರಂದು ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ವಿಜ್ಞಾನ ಮೇಳ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ವಿಜ್ಞಾನ ಮೇಳ-2023ರ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಜನವರಿ 27 ರಂದು ಶುಕ್ರವಾರ ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಪಾಲ್ಗೊಳ್ಳಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಸಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ.