i
ಒಂದೂವರೆ ಕೋಟಿ ದಂಡದೊಂದಿಗೆ ಜೈಲು ಸೇರಲಿರುವ ಭ್ರಷ್ಟ ಅರಣ್ಯಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಭ್ರಷ್ಟ ಅರಣ್ಯಾಧಿಕಾರಿಯೊಬ್ಬ ಆದಾಯ ಮೀರಿ ಕೋಟಿ ಕೋಟಿ ಅಕ್ರಮ ಆಸ್ತಿ ಗಳಿಕೆ ಮಾಡಿ ಒಂದೂವರೆ ಕೋಟಿ ರೂ.ದಂಡ ಸಹಿತ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.
ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದೆ. ಬೆಳ್ತಂಗಡಿಯ ವಲಯ ಅರಣ್ಯಾಧಿಕಾರಿಯಾಗಿದ್ದ ಎಸ್.ರಾಘವ ಪಾಟಾಳಿ ಪ್ರಕರಣದ ಆರೋಪಿ. ಅಕ್ರಮ ಆಸ್ತಿ ಗಳಿಕೆ ರುಜುವಾತು ಆಗಿದ್ದರಿಂದಾಗಿ ಆರೋಪಿತನಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ಐವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
ಒಂದು ವೇಳೆ ದಂಡ ಕಟ್ಟಲು ವಿಫಲನಾದರೆ ಮತ್ತೆ 01 ವರ್ಷಗಳ ಕಾಲ ಸಾದಾ ಸಜೆ ಶಿಕ್ಷೆ ನೀಡಿ ಆದೇಶಿಸಲಾಗಿದೆ.
2011ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. 13(1)(ಇ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ 1988, ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಧೀಶರು ದಂಡದ ಜೊತೆಗೆ ಶಿಕ್ಷೆ ವಿಧಿಸಿದ್ದಾರೆ.