
ಉ-ಕ ದಲ್ಲಿ ಜೆಡಿಎಸ್, ಕಣ್ಣು ಹಾಯಿಸಿದಷ್ಟು ದೂರಕ್ಕೆ ಜನಸಾಗರ…
ಚಂದ್ರವಳ್ಳಿ ನ್ಯೂಸ್, ರಾಯಚೂರು:
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದ ಪಂಚರತ್ನ ರಥಯಾತ್ರೆಯ ಭವ್ಯ ನೋಟ. ಅಭಿಮಾನಿಗಳು ಹಾಗೂ ಜನತಾ ದಳ ಕಾರ್ಯಕರ್ತ ಬಂಧುಗಳು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಗಾತ್ರದ ಬಾಳೆಕಾಯಿ ಹಾರ ಹಾಕಿ ಸ್ವಾಗತ ಕೋರಿದರು. ಇವರೆಲ್ಲರ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಕುಮಾರಸ್ವಾಮಿ ಭಾವುಕರಾಗಿ ನುಡಿದರು. ಈ ಕುರಿತು ಅವರು ಟ್ವೀಟ್ ಮಾಡಿದ್ದು,
ಪಂಚರತ್ನ ರಥಯಾತ್ರೆಯನ್ನು ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದಲ್ಲಿ ಆಯೋಜಿಸಿದ್ದು ಕಣ್ಣು ಹಾಯಿಸಿದಷ್ಟು ದೂರಕ್ಕೂ ಜನಸಾಗರವೇ ನೆರೆದಿತ್ತು. ಮಾನ್ವಿ ಜನರ ಮಮತೆ, ವಾತ್ಸಲ್ಯ ಕಂಡು ನನ್ನ ಹೃದಯ ತುಂಬಿ ಬಂದಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಮಾನ್ವಿ ಕ್ಷೇತ್ರದ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ, ಮಾಜಿ ಸಚಿವ ವೆಂಕಟರಾವ್ ನಾಡಗೌಡ ಸೇರಿದಂತೆ ಸ್ಥಳೀಯ, ಜಿಲ್ಲಾ ಮುಖಂಡರು ಹಾಜರಿದ್ದರು.