i
ಅಪ್ರೆಂಟಿಸ್ ಟ್ರೈನಿಗಳಿಂದ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರ ಸಚಿವಾಲಯ ಗ್ರಂಥಾಲಯದಲ್ಲಿ 2022-23 ರ ಸಾಲಿಗೆ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ಟ್ರೈನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಟೆಕ್ನೀಷಿಯನ್ ಅಪ್ರೆಂಟಿಸ್ – 05 ಟ್ರೈನಿಗಳಿಗೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಟೆಕ್ನೀಷಿಯನ್ ಅಪ್ರೆಂಟಿಸ್ – 02 ಟ್ರೈನಿಗಳಿಗೆ ಕಮರ್ಷಿಯಲ್ ಪ್ರಾಕ್ಟಿಸ್ನಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. ಮಾಹೆಯಾನ 8.000/- ರೂಗಳನ್ನು ಸ್ಟೈಫಂಡ್ ನೀಡಲಾಗುವುದು.
ನಿಗಧಿತ ವಿದ್ಯಾರ್ಹತೆಯನ್ನು 2020 ಮೇ ತಿಂಗಳ ನಂತರ ಪಡೆದವರು ಮಾತ್ರ ಈ ತರಬೇತಿಗೆ ಅರ್ಹರಾಗಿರುತ್ತಾರೆ. ತರಬೇತಿಗೆ ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಅಧೀನ ಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ, ಕೊಠಡಿ ಸಂಖ್ಯೆ – 11, ನೆಲಮಹಡಿ, ವಿಧಾನಸೌಧ, ಬೆಂಗಳೂರು -560001 ಇವರಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22033462/ 22033011 ಅಥವಾ ಇ-ಮೇಲ್ ksecretariatlibrary@gmail.com ನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವಾಲಯ ಗ್ರಂಥಾಲಯದ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.