i
ಮಾಜಿ ಶಾಸಕ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೆ ಸಿದ್ಧತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಗೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದು ಶೀಘ್ರದಲ್ಲೇ ಬಿಜೆಪಿ ತೊರೆದು ಜೆಡಿಎಸ್ ಸೇರಲಿದ್ದಾರೆ ಎಂದು ತಿಳಿದುಬಂದಿದೆ.
2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಮಲ್ಲಿಕಾರ್ಜುನ ಖೂಬಾ, ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಪರಾಭವಗೊಂಡಿದ್ದರು. ನಂತರ 2019ರಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಅವರು ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯಲು ಬಯಸಿದ್ದರಾದರೂ ಸಹ ಟಿಕೆಟ್ ಕೈತಪ್ಪಿತ್ತು. ಜೊತೆಗೆ ಬಿಜೆಪಿಯಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡಿಲ್ಲವೆಂಬ ಅಸಮಾಧಾನ ಅವರಿಗಿದೆ. ಹೀಗಾಗಿ ಬಿಜೆಪಿ ತೊರೆದು ಮತ್ತೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.