i
ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಹಾಸನ:
ಅತ್ಯಂತ ಗೊಂದಲ ಮೂಡಿಸಿದ್ದ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಹಾಲಿ ಶಾಸಕ ಶಿವಲಿಂಗೇಗೌಡ ಅವರನ್ನು ಬಿಟ್ಟು ಬೇರೊಬ್ಬ ಜೆಡಿಎಸ್ ಅಭ್ಯರ್ಥಿ ಹೆಸರನ್ನು ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಘೋಷಣೆ ಮಾಡುವ ಮೂಲಕ ಎಲ್ಲ ರೀತಿಯ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಅರಸೀಕೆರೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.
ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲು ಸಜ್ಜಾಗಿರುವ ಶಾಸಕ ಶಿವಲಿಂಗೇಗೌಡಗೆ ದಳಪತಿಗಳು ಶಾಕ್ ಕೊಟ್ಟಿದ್ದಾರೆ. ಭದ್ರಕೋಟೆಯ ನಾಡಿನಲ್ಲಿ ಜಾತ್ಯತೀತ ಜನತಾ ದಳ ಬೃಹತ್ ಸಮಾವೇಶ ನಡೆಸುತ್ತಿದೆ. ಅರಸೀಕೆರೆ ಜೆಡಿಎಸ್ ಅಭ್ಯರ್ಥಿಯನ್ನು ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.