i
ಭೀಕರ ರಸ್ತೆ ಅಪಘಾತ ಬೈಕ್ ಸವಾರಿಬ್ಬರು ಮೃತ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರಿನ ಶಿರಾ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಬಾಣಗೆರೆ ಬಳಿ ಟಿಪ್ಪರ್ ಲಾರಿ- ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಶಿರಾ ತಾಲೂಕಿನ ಚಿಕ್ಕಹುಲಿಕುಂಟೆಯ ಅನಿಲ್ ಮತ್ತು ಆಂಧ್ರದ ಅಮರಾಪುರ ಮಂಡಲ್ ಹನುಮಂತಪಲ್ಲಿಯ ಶ್ರೀಧರ್ ಮೃತಪಟ್ಟ ದುರ್ದೈವಿಗಳು. ಇವರಿಬ್ಬರು ಸೌತೇಕಾಯಿ ವ್ಯಾಪಾರ ಕೇಂದ್ರಕ್ಕೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.