i
ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ತ್ತಾರೆ-ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ರಾಯಚೂರು:
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಗೆ ಸೇರುತ್ತಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಿವಲಿಂಗೇಗೌಡರು 100 ರಷ್ಟು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಅವರು ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಅನುಮಾನ ಬೇಡ, ಅನುಮಾನವಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಅಧಿವೇಶನ ಮುಗಿಯುತ್ತಿದ್ದಂತೆ ಶಿವಲಿಂಗೇಗೌಡರು ಯಾವಾಗ ಬೇಕಾದರೂ ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದರು.