i
ಜಿಲ್ಲಾಧಿಕಾರಿಗಳ ಕಚೇರಿಯ ನೂರಾರು ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ 105 ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಲೋಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ಕನಿಷ್ಟ 18 ರಿಂದ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000 ರಿಂದ 28,950 ರೂ. ವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಮಾರ್ಚ್ 15,2023ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.