i
ಬಿಜೆಪಿ ಶಾಸಕ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಒಟ್ಟು 8 ಪ್ರಕರಣಗಳಿಗೆ ಸಂಬಂಧಿಸಿದಂತೆ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದ್ದು, ಒಟ್ಟು 4 ವರ್ಷಗಳ ಕಾಲ ಶಾಸಕ ಕುಮಾರಸ್ವಾಮಿ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.
ಶಾಸಕ ಕುಮಾರಸ್ವಾಮಿ ಅವರು ಹೂವಪ್ಪ ಗೌಡ ಅವರಿಂದ 1.35 ಕೋಟಿ ರೂ. ಸಾಲವನ್ನು ಪಡೆದುಕೊಂಡಿದ್ದು ಸಾಲ ಮರುಪಾವತಿಗಾಗಿ ಒಟ್ಟು 8 ಚೆಕ್ ಗಳನ್ನು ನೀಡಿದ್ದರು. ಆದರೆ ಎಲ್ಲಾ ಚೆಕ್ ಗಳು ಬೌನ್ಸ್ ಆಗಿದ್ದವು. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಹೂವಪ್ಪ ಗೌಡ ಅವರು ಜನಪ್ರತಿನಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ ವಿವಾದ ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜೆ.ಪ್ರೀತ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಒಟ್ಟು ಎಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.