i
ಕುರುಬರಿಗೆ ಉಪಮುಖ್ಯಮಂತ್ರಿ ಸ್ಥಾನ ಸ್ವಾಗತಿಸಿದ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುರುಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುರುಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಕುರುಬರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದರೆ ಬಹಳ ಸಂತೋಷ ಎಂದು ಸಿದ್ದರಾಮಯ್ಯ ತಿಳಿಸಿದರು.