i
ಕಾಲೇಜ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಾಚಾರ್ಯನ ಬಂಧನ…
ಚಂದ್ರವಳ್ಳಿ ನ್ಯೂಸ್, ಅರಕಲಗೂಡು:
ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಚಾರ್ಯನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಜರುಗಿದೆ.
ಕಾಲೇಜಿನ ಪ್ರಾಚಾರ್ಯರು ನೀಡುತ್ತಿದ್ದ ಲೈಂಗಿಕ ಕಿರುಕುಳ ವಿರೋಧಿಸಿ ವಿದ್ಯಾರ್ಥಿನಿಯರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಪ್ರಕರಣದ ಮಾಹಿತಿ ಪಡೆದ ಸಿಡಿಪಿಒ ಇಂದಿರಾ ಕಾಲೇಜಿಗೆ ತೆರಳಿ, ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಈ ವೇಳೆ ಮಾಹಿತಿ ನೀಡಿರುವ ವಿದ್ಯಾರ್ಥಿನಿಯರು, ಪ್ರಾಚಾರ್ಯರು ತಮ್ಮ ಅಂಗಾಂಗ ಸ್ಪರ್ಶಿಸುತ್ತಿದ್ದರು. ಎನ್ಎಸ್ಎಸ್ ಶಿಬಿರ, ಪ್ರವಾಸಕ್ಕೆ ಹೋದ ಸಂದರ್ಭ ತಮ್ಮ ದೇಹದ ವಿವಿಧ ಭಾಗಗಳನ್ನು ಮುಟ್ಟುತ್ತಿದ್ದರು ಎಂದು ಆರೋಪಗಳ ಸುರಿಮಳೆಗೈದಿದ್ದರು.
ಅಲ್ಲದೆ ವಿದ್ಯಾರ್ಥಿನಿಯೊಬ್ಬಳನ್ನು ಹಾಸನದ ತಮ್ಮ ಕೋಣೆಗೆ ಬರುವಂತೆ ಪ್ರಾಚಾರ್ಯರು ಒತ್ತಾಯಿಸಿದ್ದರಿಂದ ಮನನೊಂದ ಬಾಲಕಿ ಮನೆಯಲ್ಲಿ ಅಳುತ್ತಾ ಕುಳಿತಿದ್ದ ಸಂದರ್ಭದಲ್ಲಿ ಆಕೆಯ ಸಹೋದರ ವಿಚಾರಿಸಿದಾಗ ವಿಷಯ ಬಯಲಿಗೆ ಬಂದಿದೆ ಎನ್ನಲಾಗಿದೆ.