i
ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ-ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ರಾಜ್ಯದ ಜನತೆಗೆ ನೀಡಿರುವ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಹುನುಗುಂದದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿರುವ ಭರವಸೆ ಕಾರ್ಡ್ ಗಳನ್ನು ವಿತರಿಸಿದೆ. ನಾವು ನುಡಿದಂತೆ ನಡೆಯುವವರು, ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸದೆ ಹೋದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ವಿನಃ ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ ಎಂದು ಘೋಷಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮೆಲ್ಲರ ಬೇಡಿಕೆ ಈಡೇರಿಸುತ್ತೇವೆ. ಬಿಜೆಪಿ ಸುಳ್ಳಿನ ಕಾರ್ಖಾನೆ. ಬಿಜೆಪಿಯವರು ಬಿಜೆಪಿ ಕೊಟ್ಟ ಮಾತಿನಂತೆ ನಡೆಯಲಿಲ್ಲ , ಸಿದ್ದರಾಮಯ್ಯರನ್ನು ಮುಗಿಸ್ತೀವಿ ಅಂತಾ ಹೇಳ್ತಾರಲ್ಲ ..ಇದು ಎಂತಹ ಮಾತು..ಇದು ಸರೀನಾ..? ಎಂದು ಪ್ರಶ್ನಿಸಿದರು.
ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿ ಜೆ.ಪಿ ನಡ್ಡಾಗೂ ರಾಜಕೀಯ ಜ್ಞಾನವಿಲ್ಲ. ಕರ್ನಾಟಕಕ್ಕೆ ಪ್ರಧಾನಿ ಮೋದಿ, ಜೆ.ಪಿ ನಡ್ಡಾ, ಅಮಿತ್ ಶಾ ಎಷ್ಟೇ ಬಾರಿ ಬಂದರೂ ಪ್ರಯೋಜನವಿಲ್ಲ. ರಾಜ್ಯದ ಜನರು ಬಿಜೆಪಿ ಸೋಲಿಸಲು ತೀರ್ಮಾನಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.