i
ಕಾಂಗ್ರೆಸ್ ಪಕ್ಷ ಸೇರಿದ 300ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ 300ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ತೊರೆದು ಕ್ಷೇತ್ರದ ಶಾಸಕ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಬಿಜೆಪಿಗೆ ಮರ್ಮಾಘಾತ ನೀಡಿದ್ದಾರೆ.
ಬಿಜೆಪಿ ನಾಯಕ ಬಾಬು ಹಾಗೂ ಸ್ಥಳೀಯ ಮುಖಂಡರುಗಳಿಗೆ ಶಾಸಕ ದಿನೇಶ್ ಗುಂಡೂರಾವ್ ಪಕ್ಷದ ಶಾಲು ಹೊದಿಸಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರ ನಡೆಸಲಿದೆ. ಪಕ್ಷದಲ್ಲಿ ಹೊಂದಾಣಿಕೆ ಮುಖ್ಯ. ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಕಿವಿ ಮಾತು ಹೇಳಿದರು.