i
ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಗಳೂರು ನಗರದಲ್ಲಿ ಉತ್ತಮ ಹೆಸರು ಮಾಡಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ದಕ್ಷಿಣ(ಸಂಚಾರ) ವಿಭಾಗದ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ. ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ಹಾಗೂ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಯಾಗಿ ಯಶೋಧಾ ವಂಟಗೋಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನು, ಕೆಎಸ್ಆರ್ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್ಲೆಸ್ ಎಸ್ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.