i
ಮಾರ್ಚ್-1 ರಿಂದ 7ನೇ ವೇತನ ಆಯೋಗ ಜಾರಿ ಸೇರಿ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ನೌಕರರ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಮಾರ್ಚ್ 1 ರಿಂದ ಸರ್ಕಾರಿ ನೌಕರರು ವಿವಿಧ ಬೇಡಿಕೆ ಆಗ್ರಹಿಸಿ ಅನಿರ್ದಿಷ್ಟಾವಧಿವರೆಗೆ ರಾಜ್ಯದ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ನಿರ್ಧರಿಸಿದ್ದೇವೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೌಕರರ ಬೇಡಿಕೆಗಳ ಈಡೇರಿಕೆಗೆ ಉದಾಸೀನತೆ ತೋರಿಸಿದ್ದಾರೆ. ಬೊಮ್ಮಾಯಿ ಅವರ ಧೋರಣೆಯಿಂದ ರಾಜ್ಯದ 9 ಲಕ್ಷ ನೌಕರರಿಗೆ ಬೇಸರ ಆಗಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಬೃಹತ್ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.
7ನೇ ವೇತನ ಆಯೋಗದ ಶಿಫಾರಸ್ ಜಾರಿಗೆ ಸರ್ಕಾರ ಮಧ್ಯಂತರ ಆದೇಶ ಹೊರಡಿಸಿದರೆ ಮಾತ್ರ ಹೋರಾಟ ವಾಪಸ್ ಪಡೆಯುತ್ತೇವೆ ಇಲ್ಲದಿದ್ದರೆ ಮುಷ್ಕರ ಮಾಡುವುದು ಖಚಿತ. ಇದಕ್ಕೆ ಅವಕಾಶ ನೀಡದೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.