i
2023ರ ಚುನಾವಣೆ ನನ್ನ ಕೊನೆ ಚುನಾವಣೆ, ರಾಜಕೀಯ ನಿವೃತ್ತಿ ಘೋಷಿಸಿದ್ರಾ ಕುಮಾರಸ್ವಾಮಿ!?…
ಚಂದ್ರವಳ್ಳಿ ನ್ಯೂಸ್,ಚನ್ನಪಟ್ಟಣ:
2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರಲ್ಲಿ ಸ್ಪರ್ಧಿಸುವುದಿಲ್ಲ, ಚನ್ನಪಟ್ಟಣದ ಅಭ್ಯರ್ಥಿಯಾಗಿ ಸ್ಪರ್ಧಿಸುವುದೇ ನನ್ನ ಕೊನೆ ಚುನಾವಣೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಸೋಮವಾರ ಬಮುಲ್ ಉತ್ಸವದಲ್ಲಿ ಪಾಲ್ಗೊಂಡಿದ್ದ ಅವರು ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ. ಇಲ್ಲಿನ ಕಾರ್ಯಕರ್ತರಿಗೇ ಟಿಕೆಟ್ ನೀಡುತ್ತೇನೆ. ನನಗೂ ರಾಜಕೀಯವಾಗಿ ವಿಶ್ರಾಂತಿಯ ಅಗತ್ಯವಿದೆ ಎಂದು ಭಾವುಕರಾಗಿ ಹೇಳಿದರು.
ಹಾಸನ ಟಿಕೆಟ್ ಗೊಂದಲದ ಕುರಿತು ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಹಾಸನದಲ್ಲಿ ಅಭ್ಯರ್ಥಿ ಆಗಬೇಕು ಎಂದು ಆಸೆ ಇರುವವರು ಗೊಂದಲ ಸೃಷ್ಟಿಸುತ್ತಿದ್ದು, ಅದಕ್ಕೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಸದ್ಯದಲ್ಲೇ ಇದಕ್ಕೆಲ್ಲ ತೆರೆ ಎಳೆಯುತ್ತೇವೆ. ಸದ್ಯದಲ್ಲಿಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಲಿದ್ದು, ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರೂ ಇರಲಿದೆ ಎಂದು ತಿಳಿಸಿದರು.