i
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿವೃತ್ತ ರಾಗುವ ವಯಸ್ಸಲ್ಲ-ಸಿಎಂ ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇದು ತಮ್ಮ ಕೊನೆಯ ಚುನಾವಣೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೆ ಎಂದು ತಿಳಿದಿಲ್ಲ ಎಂದು ತಿಳಿಸಿದರು.
ಮಾಧ್ಯಮಗಳೊಂದಿ ಮಾತನಾಡಿದ ಸಿಎಂ ಅವರು, ಕುಮಾರಸ್ವಾಮಿ ಅವರದ್ದು ನಿವೃತ್ತಿ ಯಾಗುವ ವಯಸ್ಸಲ್ಲ. ಬಹಳ ಸೇವೆಯನ್ನು ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ರೀತಿಯದ್ದೂ ನಡೆಯುತ್ತದೆ. ಪ್ರತಿ ಚುನಾವಣೆಗೂ ಜನರ ಪ್ರಬುದ್ಧತೆ ಹೆಚ್ಚಾಗಿದೆ. ನಾವು ಮಾತನಾಡುವಾಗ ಅದರ ಹಿಂದಿನ ಚಿಂತನೆ , ಕಲ್ಪನೆ ಜನರಿಗೆ ತಿಳಿಯುತ್ತದೆ ಎಂದರು.