i
10ನೇ ತರಗತಿ ವಿದ್ಯಾರ್ಥಿಯೊಂದಿಗೆ ಪರಾರಿಯಾದ ಶಿಕ್ಷಕಿ…
ಚಂದ್ರವಳ್ಳಿ ನ್ಯೂಸ್, ಹೈದರಾಬಾದ್:
ಶಿಕ್ಷಕಿಯೊಂದಿಗೆ ವಿದ್ಯಾರ್ಥಿಯೊಬ್ಬ ಪರಾರಿಯಾಗಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದ್ದು ಪೊಲೀಸರು ಕೊನೆಗೂ ಪ್ರಕರಣವನ್ನು ಬಗೆಹರಿಸಿದ್ದಾರೆ.
ಶಿಕ್ಷಕಿ ಮತ್ತು ವಿದ್ಯಾರ್ಥಿ ಇವರಿಬ್ಬರನ್ನು ಪತ್ತೆ ಹಚ್ಚಿ ಕರೆ ತಂದಿರುವ ಪೊಲೀಸರು ಕೌನ್ಸೆಲಿಂಗ್ ನಡೆಸಿ ತಿಳುವಳಿಕೆ ಹೇಳಿ ಕಳುಹಿಸಿಕೊಟ್ಟಿದ್ದಾರೆ.
ಹೈದರಾಬಾದಿನ ಚಂದನ್ ನಗರದಲ್ಲಿ ವಾಸಿಸುತ್ತಿದ್ದ 27 ವರ್ಷದ ಅವಿವಾಹಿತ ಮಹಿಳೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಅದೇ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಒಬ್ಬನ ಪ್ರೇಮ ಪಾಶದಲ್ಲಿ ಬಿದ್ದಿದ್ದಳು.
ಕಳೆದ ಫೆಬ್ರವರಿ 16 ರಂದು ಶಾಲೆಗೆ ಹೋಗುತ್ತೇನೆ ಎಂದು ಹೇಳಿದ್ದ ಶಿಕ್ಷಕಿ ಮನೆಗೆ ಬಾರದೆ ನಾಪತ್ತೆಯಾಗಿದ್ದ ಪ್ರಕರಣ ದಾಖಲಿಸಲಾಗಿತ್ತು. ಮತ್ತು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿಯೊಬ್ಬ ಫೆಬ್ರವರಿ 20ರಂದು ನಾಪತ್ತೆಯಾಗಿದ್ದನು. ವಿದ್ಯಾರ್ಥಿಯ ಪೋಷಕರು ಶಿಕ್ಷಕಿ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.
ಹೈದರಾಬಾದಿನಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿರುವ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದರು. ಅಲ್ಲದೆ ಬೆಂಗಳೂರು-ಹೈದರಾಬಾದಿನ ವಿವಿಧ ಲಾಡ್ಜ್ ಗಳಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಹೈದರಾಬಾದಿನ ಗಚ್ಚಿಬೊಲಿ ಠಾಣೆಯ ಪೊಲೀಸರಿಗೆ ಫೆಬ್ರವರಿ 27ರಂದು ಸಿಕ್ಕಿಬಿದ್ದಿದ್ದಾರೆ. ಇದೀಗ ಇಬ್ಬರನ್ನು ಅವರವರ ಮನೆಗೆ ಕಳುಹಿಸಿಕೊಡಲಾಗಿದೆ.