i
ಭಾರತೀಯ ಆಹಾರ ನಿಗಮದ (FCI) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ನವದೆಹಲಿ: FCI Recruitment
ಭಾರತೀಯ ಆಹಾರ ನಿಗಮದ (FCI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 46 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಹಾಗೂ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- 26 ಹುದ್ದೆಗಳು, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- 20 ಹುದ್ದೆಗಳು
ಅರ್ಹತಾ: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (CE)- ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (EM)- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಹೊಂದಿರಬೇಕು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ರಿಂದ 1,80,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಈ ಮೂಲಕ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 01/04/2023
ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Deputy General Manager(Estt-I),
Food Corporation of India,
Headquarters, 16-20 Barakhamba Lane,
New Delhi-110001