i
ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಶಾಲಾ ಶಿಕ್ಷಕಿ…
ಚಂದ್ರವಳ್ಳಿ ನ್ಯೂಸ್, ವಿಜಯಪುರ:
ಪತಿ ಮತ್ತು ಅವರ ಕುಟುಂಬದವರು ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ವಿಜಯಪುರದ ವಿಜಯನಗರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಕಳೆದ 10 ವರ್ಷಗಳ ಹಿಂದೆ ಶಾಲಾ ಶಿಕ್ಷಕ ರೂಪಾ ಮತ್ತು ಅರ್ಜುನ್ ವಿವಾಹವಾಗಿದ್ದರು. ಪತಿ ಸೇರಿದಂತೆ ಅವರ ಕುಟುಂಬದವರು ವರದಕ್ಷಿಣೆ ರೂಪದಲ್ಲಿ ಹೆಚ್ಚಿನ ಹಣ ನೀಡುವಂತೆ ಮನೆಯವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ರೂಪಾ ಅವರು ಹಡಗಲಿಯ ನ್ಯಾಷನಲ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿದೆ.
ನನ್ನ ಗಂಡ ನನ್ನ ಜೊತೆ ಜೀವನ ನಡೆಸಲು ನಿರಾಕರಿಸಿದ ಕಾರಣ ಮಾನಸಿಕವಾಗಿ ಬಹಳ ನೊಂದು ಸಾಯಲು ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಗಂಡನನ್ನು ಬಿಟ್ಟು ಬದುಕುವ ಶಕ್ತಿ ನನಗಿಲ್ಲ. ನನ್ನ ಜೀವಕ್ಕಿಂತ ಹೆಚ್ಚಾಗಿ ನನ್ನ ಗಂಡನನ್ನು ಪ್ರೀತಿಸುತ್ತೇನೆ. ಆತ್ಮಹತ್ಯೆ ಮಹಾಪಾಪ ಎಂಬುದು ಗೊತ್ತು. ಆದರೂ, ಹೋಗುತ್ತಿದ್ದೇನೆ. ಸಾಧ್ಯವಾದಲೆ ಎಲ್ಲರೂ ನನ್ನನ್ನು ಕ್ಷಮಿಸಿ ಎಂದು ಶಿಕ್ಷಕಿ ರೂಪಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯ ಮಾಡಿಕೊಂಡಿದ್ದಾರೆ.