i
ಮಾ. 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಎನ್.ಆರ್.ಎಲ್.ಎಂ ಸಂಜೀವಿನಿ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭ ಮಾ. 08 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಮತ್ತು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಘನ ಉಪಸ್ಥಿತಿವಹಿಸುವವರು, ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸುವರು, ವಿಶೇಷ ಆಹ್ವಾನಿತರಾಗಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ವೈ.ಎ ನಾರಾಯಣಸ್ವಾಮಿ, ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅಥಿತಿಗಳಾಗಿ ಹೊಳಲ್ಕೆರೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷರಾದ ಎಂ. ಚಂದ್ರಪ್ಪ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಗೂಳಿಹಟ್ಟಿ ಡಿ ಶೇಖರ್, ಟಿ. ರಘುಮೂರ್ತಿ, ಪೂರ್ಣಿಮಾ ಕೆ ಶ್ರೀನಿವಾಸ್, ಚಿದಾನಂದ ಎಂ ಗೌಡ, ಕೆ.ಎಸ್. ನವೀನ್, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ ಸುರೇಶ್, ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಕೊಲ್ಲಿ ಲಕ್ಷ್ಮಿ ಸೇರಿದಂತೆ ಇತರರು ಭಾಗವಹಿಸಲ್ಲಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಡಿ.ಕೆ.ಶೀಲಾ ಹಾಗೂ ಬಾಲನ್ಯಾಯ ಮಂಡಳಿ ಸದಸ್ಯೆ ಸುಮನ ಎಸ್ ಅಂಗಡಿ ವಿಶೇಷ ಉಪನ್ಯಾಸ ನೀಡುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.