i
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯಿಂದ 120 ಕ್ಷೇತ್ರಕ್ಕೆ ಅಭ್ಯರ್ಥಿ ಪಟ್ಟಿ ಅಂತಿಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಕಾಂಗ್ರೆಸ್ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿ ಮುಂಬರುವ 2023ರ ವಿಧಾನಸಭಾ ಚುನಾವಣೆಗೆ 120 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
AICC ಪ್ರಧಾನ ಕಾರ್ಯದರ್ಶಿ ಹಾಗೂ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ನೇತೃತ್ವದ ಸಮಿತಿ ಬೆಂಗಳೂರಿನಲ್ಲಿ ಸಭೆ ನಡೆಸಿ 120 ಕ್ಷೇತ್ರಗಳ ಅಭ್ಯರ್ಥಿಗಳನ್ನು ಫೈನಲ್ ಮಾಡಿದೆ. ಉಳಿದ 104 ಕ್ಷೇತ್ರಗಳಿಗೆ ಶೀಘ್ರದಲ್ಲೇ ಅಭ್ಯರ್ಥಿಗಳು ಫೈನಲ್ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ, ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಒಪ್ಪಿಗೆ ಪಡೆಯುವುದು ಮಾತ್ರ ಬಾಕಿಯಿದೆ. ಹೈಕಮಾಂಡ್ ಓಕೆ ಅಂದರೆ ಮೊದಲ ಪಟ್ಟಿಯಲ್ಲಿ 120 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡಲಾಗುತ್ತದೆ, ಅಲ್ಲದೆ ಉಳಿದ 104 ಕ್ಷೇತ್ರಗಳ ಎರಡನೇ ಪಟ್ಟಿಯೂ ಶೀಘ್ರವೇ ಸಿದ್ಧ ಮಾಡಿ ಹೈಕಮಾಂಡ್ ರವಾನೆ ಮಾಡದ್ದಾರೆ ಎನ್ನಲಾಗುತ್ತಿದೆ.