i
ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತ ಬೇಡ-ನಗರಸಭೆ ಅಧ್ಯಕ್ಷೆ ಗೀತಾ ಗಂಗಾಧರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತ ಮಾಡದೇ ನಿತ್ಯ ಮಹಿಳಾ ದಿನಾಚರಣೆಯಾಗಬೇಕು, ಈ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬ ಮಹಿಳೆಯರು ಶಿಕ್ಷಣವಂತರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು, ಆಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ನಗರಸಭೆ ಅಧ್ಯಕ್ಷೆ ಗೀತಾ ಗಂಗಾಧರ್ ಹೇಳಿದರು.
ನಗರದ ನಗರಸಭೆ ಸಭಾಂಗಣದಲ್ಲಿ ನಗರಸಭೆ ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ ಅವರು ಮಾತನಾಡಿದರು.
ಇಂದಿನ ಆಧುನಿಕ ಜಗತ್ತಿನಲ್ಲಿ ಪುರುಷರಿಗೆ ಸರಿಸಮಾನವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುವ ಮೂಲಕ ಸಾಧನೆ ಮಾಡಿದ್ದು, ಶೈಕ್ಷಣಿಕ, ರಾಜಕೀಯ, ಕ್ರೀಡೆ, ಚಿತ್ರರಂಗ, ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ತೋರಿಸಿ, ಹೆಸರು ಮಾಡಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್, ಮಾಜಿ ಅಧ್ಯಕ್ಷೆ ಶಿವರಂಜಿನಿಯಾದವ್, ಸದಸ್ಯರುಗಳಾದ ರತ್ನಮ್ಮ, ವಿಶಾಲಾಕ್ಷಮ್ಮ, ಅಂಬಿಕಾ ಆರಾಧ್ಯ, ಕಂದಾಯ ಅಧಿಕಾರಿ ಜಯಣ್ಣ, ಆರೋಗ್ಯ ನಿರೀಕ್ಷಕಿ ಸಂಧ್ಯಾ, ಮೀನಾಕ್ಷಿ, ಸೇರಿದಂತೆ ಅನೇಕ ಮಹಿಳಾ ಸದಸ್ಯರು ಹಾಗೂ ಮಹಿಳಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.