i
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾ.12 ರಂದು ವಿದ್ಯುತ್ ವ್ಯತ್ಯಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿದ್ದು, ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್ಜೆವೈ ಮತ್ತು ಕೃಷಿ 11 ಕೆವಿ ಮಾರ್ಗಗಳಲ್ಲಿ ಇದೇ ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ವಿವರ ಇಂತಿದೆ. ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಜಿ.ಆರ್ ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡವಾಣೆ, ಚಂದ್ರವಳ್ಳಿ, ಪಿಳ್ಳೇಕೆರನಹಳ್ಳಿ, ಮಿಲ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯುನಿವರ್ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.