i
ಪಿ.ಹೆಚ್.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯ 2023ನೇ ಸಾಲಿನ ಪಿಹೆಚ್.ಡಿ. ಪದವಿ ಕೋರ್ಸಿನ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ನಿಗಧಿಪಡಿಸಿದ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯ ಆಧಾರದಲ್ಲಿ ನಡೆಯಲಿದ್ದು, ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಹಾಗೂ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ಪಡೆಯಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಗಧಿಪಡಿಸಿದ ಅರ್ಜಿ ನಮೂನೆ ಹಾಗೂ ಇತರೆ ಮಾಹಿತಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯ ಜಾಲತಾಣ https://eng.bangaloreuniversity.ac.in ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಮಾರ್ಚ್ 20 ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 06 ಕೊನೆಯ ದಿನಾಂಕವಾಗಿದೆ. ದಂಡ ಸಹಿತ ಅರ್ಜಿ ಸಲ್ಲಿಸಲು ಏಪ್ರಿಲ್ 15, ಅಂತರ್ಜಾಲದಲ್ಲಿ ಸಲ್ಲಿಸಿದ ಮೂಲ ಅರ್ಜಿಯ ಪ್ರತಿಯನ್ನು ವಿಶ್ವವಿದ್ಯಾಲಯದ ಸಂಬಂಧಪಟ್ಟ ವಿಭಾಗಳಿಗೆ ತಲುಪಿಸಲು ಏಪ್ರಿಲ್ 21 ಕೊನೆಯ ದಿನಾಂಕವಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಭರ್ತಿಮಾಡಿದ ಅರ್ಜಿಯನ್ನು ಸಂಬಂಧಪಟ್ಟ ದಾಖಲೆಗಳು ಹಾಗೂ ಆನ್ಲೈನ್ ಒಂದು ಪ್ರತಿಯನ್ನು ಮುಖ್ಯಸ್ಥರು, ಸಂಬಂಧಪಟ್ಟ ವಿಭಾಗಗಳು, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು – 560 056 ಇವರಿಗೆ ತಲುಪುವಂತೆ ಖುದ್ದಾಗಿ, ಸ್ಪೀಡ್ ಪೋಸ್ಟ್ ಅಥವಾ ಕೊರಿಯರ್ ಮೂಲಕ ಕಳುಹಿಸಬೇಕು ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.