i
ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ 10 ಸಾವಿರ ದಂಡ ಮತ್ತು ರದ್ದು ಶಿಕ್ಷೆ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾರ್ಚ್ 31, 2023 ರೊಳಗೆ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಪಾನ್ ಕಾರ್ಡ್ ಲಿಂಕ್ ಮಾಡಬೇಕೆಂದು ಆದಾಯ ತೆರಿಗೆ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಿದ್ದು ಇದರ ಪ್ರಕಾರ ಪಾನ್ ಕಾರ್ಡ್ ಹೊಂದಿರುವ ಸಾರ್ವಜನಿಕರು ಕೂಡಲೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ದಂಡ ಮತ್ತು ಪಾನ್ ಕಾರ್ಡ್ ಶಿಕ್ಷೆಯಿಂದ ಮುಕ್ತಿ ಪಡೆಯಿರಿ.
ಮಾರ್ಚ್ 31ರ ಮೊದಲು ಆಧಾರ್ನೊಂದಿಗೆ ಪ್ಯಾನ್ ಲಿಂಕ್ ಮಾಡದಿದ್ದರೆ 2023 ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ. ಪಾನ್ ಬಳಕೆದಾರರು ಈ ಗಡುವನ್ನು ದಾಟಿದ ನಂತರ, ಪಾನ್ ಹೊಂದಿರುವವರು ತಮ್ಮ ಹತ್ತು-ಅಂಕಿಯ ವಿಶಿಷ್ಟ ಆಲ್ಫಾನ್ಯೂಮರಿಕ್ ಸಂಖ್ಯೆಯನ್ನು ಬಳಸಲು ಸಾಧ್ಯವಾಗುವುದಿಲ್ಲ. ಪಾನ್ಗೆ ಲಿಂಕ್ ಮಾಡಲಾದ ಹಣಕಾಸಿನ ವಹಿವಾಟುಗಳನ್ನು ನಿಲ್ಲಿಸಲಾಗುತ್ತದೆ. ಅಷ್ಟೇ ಅಲ್ಲದೇ ಆದಾಯ ತೆರಿಗೆ ಬಾಕಿ ರಿಟರ್ನ್ಸ್ ಪ್ರಕ್ರಿಯೆಯಿಂದ ನಿಲ್ಲಿಸಲಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ಪಾನ್ ಕಾರ್ಡ್ ಹೊಂದಿರುವ ಗ್ರಾಹಕರೇ ಆಧಾರ್ ಕಾರ್ಡ್ ಗೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ತಡ ಮಾಡದೇ, ಇಂದೇ ಲಿಂಕ್ ಮಾಡಿ! ಆದಾಯ ತೆರಿಗೆ ಕಾಯಿದೆಯ ಪ್ರಕಾರ, ವಿನಾಯಿತಿ ವರ್ಗದ ಅಡಿಯಲ್ಲಿ ಬರದ ಎಲ್ಲಾ ಪಾನ್ ಕಾರ್ಡ್ ಬಳಕೆದಾರರು ತಮ್ಮ ಶಾಶ್ವತ ಖಾತೆ ಸಂಖ್ಯೆಗಳನ್ನು ಮಾರ್ಚ್ 31, 2023 ರ ಮೊದಲು ಆಧಾರ್ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಏಪ್ರಿಲ್ 1, 2023 ರಿಂದ, ಆಧಾರ್ ಲಿಂಕ್ ಮಾಡದ ಪಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಸಾರ್ವಜನಿಕರಿಗೆ ಸಲಹೆ ನೀಡಿದೆ.
ದೇಶದಲ್ಲಿನ ಕೆಲ ನಿವಾಸಿಗಳಿಗೆ ಪಾನ್ ಕಾರ್ಡ್ನ್ನೊಂದಿಗೆ ಆಧಾರ್ ಲಿಂಕ್ ಮಾಡುವುದರಿಂದ ವಿನಾಯಿತಿ ಪಡೆದಿದ್ದಾರೆ. ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ ಮತ್ತು ಮೇಘಾಲಯದಲ್ಲಿ ನೆಲೆಸಿರುವ ತೆರಿಗೆದಾರರು, ಆದಾಯ ತೆರಿಗೆ ಕಾಯಿದೆ, 1961 ರ ಪ್ರಕಾರ ಅನಿವಾಸಿ, ಹಿಂದಿನ ವರ್ಷದಲ್ಲಿ ಯಾವುದೇ ಸಮಯದಲ್ಲಿ ಎಂಬತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು, ಭಾರತದ ಪ್ರಜೆಯಲ್ಲದೇ ಇರುವವರಿಗೆ, ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಆಧಾರ್ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಲು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ 31 ಮಾರ್ಚ್ 2023 ರವರೆಗೆ ವಿಸ್ತರಿಸಿದೆ. ಲಿಂಕ್ ಮಾಡುವ ಪ್ರಕ್ರಿಯೆ ಪ್ರಾರಂಭಿಸಲು ತೆರಿಗೆದಾರರು 1000 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಮಾರ್ಚ್ 31, 2023 ರವರೆಗೆ ಜನರು ಪಾನ್-ಆಧಾರ್ ಅನ್ನು ಲಿಂಕ್ ಮಾಡಲು ವಿಫಲವಾದರೆ ಅವರ ಪಾನ್ ಕಾರ್ಡ್ ಸಂಖ್ಯೆ ನಿಷ್ಕ್ರಿಯಗೊಳ್ಳುವ ಜೊತೆಗೆ ಅದರ ನಂತರ ಆಧಾರ್ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡುವವರು 10000 ರೂ.ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಪ್ಯಾನ್ ಕಾರ್ಡ್ನ್ನೊಂದಿಗೆ ಆಧಾರ್ ಲಿಂಕ್ ಮಾಡುವ ವಿಧಾನ:
1000 ರೂ. ಶುಲ್ಕವನ್ನು ಪಾವತಿಸಿದ ನಂತರ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಆದ www.incometax.gov.in ನಲ್ಲಿ ಪಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬಹುದು. UIDAI ಅಥವಾ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ವೆಬ್ಸೈಟ್ ಇದನ್ನು ಮಾಡಲು ಸಂಪೂರ್ಣ ಮಾರ್ಗದರ್ಶಿಯನ್ನು ನೀಡಿದ್ದು ಈ ಕೆಳಗೆ ತಿಳಿಸಲಾಗಿದೆ.
ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್ಗೆ ಹೋಗಿ – https://incometaxindiaefiling.gov.in/
ವೆಬ್ಸೈಟ್ನಲ್ಲಿ ನೋಂದಾಯಿಸಬೇಕು. ನಿಮ್ಮ ಪಾನ್ ಸಂಖ್ಯೆಯು ನಿಮ್ಮ ಬಳಕೆದಾರ ಐಡಿ ಆಗಿರುತ್ತದೆ.
ಬಳಕೆದಾರ ಐಡಿ, ಪಾಸ್ವರ್ಡ್ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಲಾಗ್ ಇನ್ ಮಾಡಬೇಕು. ಈಗ, ಪಾಪ್-ಅಪ್ ವಿಂಡೋ ಕಾಣಿಸಿಕೊಳ್ಳುತ್ತದೆ. ನಿಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ನಿಮ್ಮನ್ನು ಕೇಳುತ್ತದೆ. ವಿಂಡೋ ಕಾಣಿಸದಿದ್ದರೆ, ಮೆನು ಬಾರ್ನಲ್ಲಿ ಪ್ರೊಫೈಲ್ ಸೆಟ್ಟಿಂಗ್ಗಳು ಗೆ ಹೋಗಿ ಮತ್ತು ಲಿಂಕ್ ಆಧಾರ್‘ ಕ್ಲಿಕ್ ಮಾಡಬೇಕು.
ಪಾನ್ ಕಾರ್ಡ್ ವಿವರಗಳ ಪ್ರಕಾರ ಹುಟ್ಟಿದ ದಿನಾಂಕ ಮತ್ತು ಲಿಂಗದಂತಹ ಕೆಲವು ಖಾಲಿ ಜಾಗಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತದೆ.
ನಿಮ್ಮ ಆಧಾರ್ನಲ್ಲಿ ನಮೂದಿಸಲಾದ ಪಾನ್ ವಿವರಗಳನ್ನು ಪರದೆಯ ಮೇಲೆ ಪರಿಶೀಲಿಸಬೇಕು. ವಿವರಗಳು ಹೊಂದಾಣಿಕೆಯಾದರೆ, ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಈಗ ಲಿಂಕ್ ಮಾಡಿ ಬಟನ್ ಕ್ಲಿಕ್ ಮಾಡಬೇಕು. ನಿಮ್ಮ ಆಧಾರ್ ಅನ್ನು ನಿಮ್ಮ ಪ್ಯಾನ್ಗೆ ಯಶಸ್ವಿಯಾಗಿ ಲಿಂಕ್ ಮಾಡಲಾಗಿದೆ ಎಂದು ಪಾಪ್-ಅಪ್ ಸಂದೇಶವು ನಿಮಗೆ ತಿಳಿಸುತ್ತದೆ. ನಿಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಲು ನೀವು https://www.utiitsl.com/ ಅಥವಾ https://www.egov-nsdl.co.in/ ಗೆ ಭೇಟಿ ನೀಡಬಹುದಾಗಿದೆ.