i
ಸಚಿವ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ..
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸಚಿವ ಬಿ.ಶ್ರೀರಾಮುಲು ಸ್ಪರ್ಧಿಸದೆ ಸ್ವಂತ ಜಿಲ್ಲೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲಾಗುತ್ತದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಬಳ್ಳಾರಿ ನಗರ ಕ್ಷೇತ್ರದಿಂದ ಕೆಆರ್ ಪಿ ಪಕ್ಷದಿಂದ ಆಪ್ತ ಮಿತ್ರ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕಿಳಿದಿದ್ದಾರೆ. ಇದೀಗ ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಶ್ರೀರಾಮುಲು ಹಾಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿದ್ದು ಸೋಲಿನ ಭೀತಿಯಿಂದ ಈ ಕ್ಷೇತ್ರವನ್ನು ತಮ್ಮ ಮಿತ್ರ ನೇರ್ಲಗುಂಟೆ ತಿಪ್ಪೇಸ್ವಾಮಿಗೆ ಬಿಟ್ಟು ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.