
ಲೋಕಾಯುಕ್ತ ದಾಳಿ, ಬೆಸ್ಕಾಂ ಎಇಇ 10 ಸಾವಿರ ಲಂಚ ಸ್ವೀಕರಿಸುವಾಗ ಬಂಧನ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಬೆಸ್ಕಾಂ ಎಇಇ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಬೆಸ್ಕಾಂ ಕಚೇರಿಯಲ್ಲಿ ಎಇಇ ತಿರುಪತಿ ನಾಯ್ಕ್ ಅವರು ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಗುತ್ತಿಗೆದಾರರ ಬಳಿ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿತ್ರದುರ್ಗ ಲೋಕಾಯುಕ್ತ ಎಸ್ ಪಿ ವಾಸುದೇವ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಸದ್ಯ ಆರೋಪಿ ಜೈಲು ಸೇರಿದ್ದಾರೆ.