
ಯಾರು ಏನೇ ಹೇಳಲಿ ಕಾಂಗ್ರೆಸ್ ಟಿಕೆಟ್ ನಂದೇ ಎನ್ನುವ ಸುಧಾಕರ್ ಅವರ ಪ್ರಚಾರದ ಝಲಕ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ಅವರು ಕೂನಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಚ್ಚವ್ವನಹಳ್ಳಿ, ದೊಡ್ಡಘಟ್ಟ, ಕೂನಿಕೆರೆ ಮತ್ತಿತರ ಗ್ರಾಮಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ಮಾಡಿದರು.
ಅಷ್ಟೇ ಅಲ್ಲ ಮನೆ ಮನೆಗಳಿಗೆ ಭೇಟಿ ನೀಡಿ ಮುಂಬರುವ ಚುನಾವಣೆಯಲ್ಲಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಕಳೆದೊಂದು ವಾರದಿಂದ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆಂದು ಬಿಂಬಿತವಾಗುತ್ತಿದೆ. ಇದನ್ನೆಲ್ಲ ಅಲ್ಲಗಳಿಯುತ್ತಿರುವ ಸುಧಾಕರ್ ಅವರು ಮಾತ್ರ ಕಾಂಗ್ರೆಸ್ ಟಿಕೆಟ್ ನನ್ನದೇ ಎಂದು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಆಯಾಯ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.