i
ಮಾರ್ಚ್ ಕೊನೆ ವಾರ ಅಥವಾ ಏಪ್ರಿಲ್ ಮೊದಲ ವಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023 ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಮಾರ್ಚ್ ಕೊನೆ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
2023ರ ಮೇ ಎರಡನೇ ವಾರದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ನಿರೀಕ್ಷೆ ಇದ್ದು ರಾಜ್ಯ ಚುನಾವಣಾ ಆಯೋಗ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಮೇ 24ಕ್ಕೆ ಹಾಲಿ ವಿಧಾನಸಭೆ ಅವಧಿ ಅಂತ್ಯವಾಗಲಿದ್ದು, ಕಳೆದ ಬಾರಿ ಮೇ 12ರಂದು ಚುನಾವಣೆ ನಡೆಸಲಾಗಿತ್ತು. ಈಗಾಗಲೇ ಕೇಂದ್ರ ಚುನಾವಣಾ ಆಯೋಗ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದೆ. ಇದೇ ತಿಂಗಳ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.
2018ರ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.