
ಸಹೋದರನಿಗೆ ಕಾಮಗಾರಿ ಗುತ್ತಿಗೆ ನೀಡಿಕೆ ಪುರಸಭೆ ಸದಸ್ಯನ ಸದಸ್ಯತ್ವ ಅನರ್ಹ…
ಚಂದ್ರವಳ್ಳಿ ನ್ಯೂಸ್, ಗದಗ: ಪುರಸಭಾ ಸದಸ್ಯನ ಸಹೋದರನಿಗೆ ಕಾಮಗಾರಿ ಗುತ್ತಿಗೆ ನೀಡಿದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪುರಸಭೆ 15ನೇ ವಾರ್ಡ್ ಸದಸ್ಯ ರಾಜೀವ ಕುಂಬಿ ಎಂಬುವವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ.
ಪುರಸಭೆ ಸದಸ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದರಿಂದ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 ಕಲಂ 16ರ ಉಲ್ಲಂಘನೆ ದೃಢಪಟ್ಟ ಹಿನ್ನೆಲೆಯಲ್ಲಿ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ಅನರ್ಹಗೊಂಡ ವಾರ್ಡ್ ಸದಸ್ಯ ರಾಜೀವ ಕುಂಬಿ, ಸಹೋದರ ವಿಜಯ ಕುಂಬಿಗೆ ಪುರಸಭೆ ಕಾಮಗಾರಿಗಳನ್ನು ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ್ದರು ಎನ್ನಲಾಗಿದೆ.
ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಿ ಪುರಸಭೆ ಸದಸ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮಹೇಶ ಕಲಘಟಗಿ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಅಧಿಕಾರ ದುರುಪಯೋಗ ದೃಢಪಟ್ಟ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ರಾಜೀವ ಕುಂಬಿ ಅವರ ಪುರಸಭೆ ಸದಸ್ಯತ್ವ ಅನರ್ಹಗೊಳಿಸಿದ್ದಾರೆ.