i
ದ್ವಿತೀಯ ಪಿಯು ಇಂಗ್ಲೀಷ್ ಪರೀಕ್ಷೆ: 793 ವಿದ್ಯಾರ್ಥಿಗಳು ಗೈರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2nd puc exam
ಮಾರ್ಚ್ 23 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಇಂಗ್ಲೀಷ್ ವಿಷಯದ ಪರೀಕ್ಷೆಗೆ 793 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಇಂಗ್ಲೀಷ್ ವಿಷಯದಲ್ಲಿ 13932 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 13139 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 793 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಯಾವುದೇ ಡಿಬಾರ್ ಪ್ರಕರಣ ಇರುವುದಿಲ್ಲ. ಮಾರ್ಚ್ 24ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 25ರಂದು ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆ ಇರುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.