i
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಆಲಿಕಲ್ಲು ಮಳೆ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 23 ರಿಂದ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿರುವುದಲ್ಲದೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿರುವುದರಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.