i
ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸುಧಾಕರ್ ಅವರಿಂದ ಮನೆ ಮನೆ ಭೇಟಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಚಾರಕ್ಕೆ ಮಾತ್ರ ಹೆಸರಾಗಿದ್ದು, ಅಗತ್ಯ ವಸ್ತುಗಳ ಬೆಲೆಗಳನ್ನು ಗಗನಕ್ಕೆ ಏರಿಸಿ, ಬಡ ಜನರನ್ನು ಸಂಕಷ್ಟಕ್ಕೆ ಗುರಿ ಮಾಡಿದ್ದು ಬಿಜೆಪಿ ವಿರುದ್ಧ ಮತ ಚಲಾಯಿಸಿ ಕಾಂಗ್ರೆಸ್ ಅಧಿಕಾರಕ್ಕೆ ತರುವಂತೆ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಹಿರಿಯೂರು ತಾಲೂಕಿನ ಇಕ್ಕನೂರು ಗ್ರಾಮ ಪಂಚಾಯಿತಿ ಭಾಗ-2ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ಚುನಾವಣಾ ಪ್ರಚಾರ ಕೈಗೊಂಡು ಮುಂಬರುವ ಚುನಾವಣೆಯಲ್ಲಿ ಆಶೀರ್ವದಿಸಬೇಕೆಂದು ಮನವಿ ಮಾಡಿ ಮಾತನಾಡಿದ ಅವರು, ರಾಜ್ಯದ ಜನರು ಜನಪರ ಆಡಳಿತಕ್ಕೆ ಹೆಸರಾದ ಕಾಂಗ್ರೆಸ್ ಪಕ್ಷ ಬೆಂಬಲಿಸಿ, ನಿಮ್ಮ ಅಮೂಲ್ಯವಾದ ಮತ ಹಾಕುವ ಮೂಲಕ ನಮ್ಮ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಗೂ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.