i
ವರುಣಾದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಲಿ ಎಂದು ಕುಟುಂಬ ಸದಸ್ಯರ ಒಪ್ಪಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023ರ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದು ಒಂದೆರಡು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ. ಈಗಾಗಲೇ ವರುಣಾದ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿನ ಹೆಲಿಪ್ಯಾಡ್ನಲ್ಲಿ ಶುಕ್ರವಾರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ 25 ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಅದೇ ರೀತಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆ. ಆದರೆ ನಾನು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದರು.
ಕ್ಷೇತ್ರದ ಮತದಾರರು ಪ್ರೀತಿಯಿಂದ ಆಹ್ವಾನ ನೀಡುತ್ತಾರೆ. ಆದರೆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವುದು ಸೂಕ್ತ ಎಂಬುದಾಗಿ ಕುಟುಂಬದವರ ಆಸೆಯಾಗಿದೆ. ಮತ್ತೊಂದು ಕ್ಷೇತ್ರದಲ್ಲಿಯೂ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾ ಟಿಕೆಟ್ ಅಂತಿಮಗೊಳಿಸುವಂತೆ ಪಕ್ಷಕ್ಕೆ ತಿಳಿಸಿದ್ದೇನೆ. ನಿರ್ಧಾರ ಹೈಕಮಾಂಡ್ಗೆ ಬಿಟ್ಟದ್ದು ಎಂದು ಸಿದ್ದರಾಮಯ್ಯ ತಿಳಿಸಿದರು.