i
ಬಿಜೆಪಿಗೆ ಬಿಗ್ ಶಾಕ್, ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ!?…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಡಳಿತ ರೂಢ ಬಿಜೆಪಿ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಕೊಡುತ್ತಿರುವ ವಿಧಾನ ಪರಿಷತ್ ಸದಸ್ಯರು ಮತ್ತೆ ಮತ್ತಿಬ್ಬರು ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.
ಬಿಜೆಪಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್. ಶಂಕರ್ ಕೂಡ ಕಾಂಗ್ರೆಸ್ ಸೇರಲು ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಆದರೆ ಆರ್.ಶಂಕರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ರಾಣೇಬೆನ್ನೂರಿನಿಂದ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ.