i
10ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ ಬಂಧನ…
ಚಂದ್ರವಳ್ಳಿ ನ್ಯೂಸ್, ರಾಯಚೂರು:
ರಾಯಚೂರು ತಾಲೂಕಿನ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲ ವಿಜಯಕುಮಾರ ಅಂಗಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರ ಕೊಠಡಿಗೆ ಕರೆಸಿ ಕೈ,ಮೈ ಮುಟ್ಟುವುದು ಸೇರಿದಂತೆ ಅಸಭ್ಯವಾಗಿ ಕಳೆದ 6 ತಿಂಗಳಿನಿಂದ ವರ್ತಿಸುತ್ತಿದ್ದು ಇದರಿಂದ ರೋಸಿ ಹೋಗಿದ್ದ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿ ಸೇರಿ ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೂ ಮುನ್ನ ಕಳೆದ 15 ದಿನಗಳ ಹಿಂದೆ ಸಂತ್ರಸ್ತೆ ಬಾಲಕಿಯನ್ನು ಕಚೇರಿಗೆ ಕರೆಸಿಕೊಂಡು ಮುಂದಿನ ಶಿಕ್ಷಣಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಹೇಳಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಯಾರಿಗೂ ಹೇಳದಂತೆ ಜೀವ ಬೆದರಿಕೆ ಒಡ್ಡಿದ ಎನ್ನಲಾಗಿದೆ.
ಇದರಿಂದ ಭಯಗೊಂಡ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿದ್ದಾರೆ.