i
ಜೆಡಿಎಸ್ 120 ಸ್ಥಾನ ಗೆಲ್ಲುವುದು ನಿಶ್ಚಿತ-ಹೆಚ್.ಡಿ.ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: jds get 120 seat
2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 120 ಸ್ಥಾನ ಗೆಲ್ಲುವುದು ನಿಶ್ಚಿತ, ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ 100-120 ಸ್ಥಾನ ಗೆಲ್ಲುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ 60 ಸ್ಥಾನಗಳನ್ನು ದಾಟುವುದಿಲ್ಲ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಕೋಟಾ ದೊಡ್ಡದಿದೆ. ಸಿದ್ದರಾಮಯ್ಯ ನಾನೇ ಸಿಎಂ ಆಗ್ತೀನಿ ಅಂತಾ ಅಂದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ನಾನು ಕಿಂಗ್ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕೆಲ ಕಾರಣಗಳಿಂದ ವಿಳಂಬವಾಗಿದೆ. ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿಗಳ ವಿಚಾರದಲ್ಲಿ ಚರ್ಚೆ ಮಾಡಿ ಫೈನಲ್ ಮಾಡಿದ್ದೇನೆ. ಜೆಡಿಎಸ್ ಅಭ್ಯರ್ಥಿಗಳ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರವಾಗಿ ಗೊಂದಲವಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.