i
ಸರಳವಾಗಿ ನಡೆದ ಮಹಾವೀರ ಜಯಂತೋತ್ಸವ….
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆ ಪಟ್ಟಣದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಜೈನ ಸಮಾಜದ ಸಂಯುಕ್ತಾಶ್ರಯದಲ್ಲಿ ವೈರಾಗ್ಯಮೂರ್ತಿ ಮಹಾವೀರ ಜಯಂತೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರೇಡ್ 2 ತಹಶೀಲ್ದಾರ್ ಮಾಲತಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರಸ್ವಾಮಿ , ಕೃಷಿ ಇಲಾಖೆ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ವಾಸೀಂ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜೈನ ಸಮಾಜದ ಮುಖಂಡರುಗಳಾದ ವಸಂತಕುಮಾರ್, ಸುದರ್ಶನ ಕುಮಾರ್, ನಿರ್ಮಲ್ ಜೈನ್ ಪ್ರಶಾಂತ್, ಚಂದ್ರಕಾಂತ ಮುರಗಿ, ಚಂದ್ರಪ್ರಭು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.