i
ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಗಾಗಿ ತೀವ್ರ ಪ್ರಯತ್ನ ಮಾಡುತ್ತಿರುವ ಬಾಬು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಟೆ ನಾಡಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಗುದದಾಟ ಜೋರಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಗಾಗಿ ತೀವ್ರ ಪ್ರಯತ್ನ ಮಾಡಲಾಗುತ್ತಿದ್ದು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿಗೆ ಮೊಳಕಾಲ್ಮೂರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮುತ್ತಿಗೆ ಹಾಕಿ ಡಾ.ಯೋಗೀಶ್ ಬಾಬು ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯ ಮುಂದೆ ಟಿಕೆಟ್ ಆಕಾಂಕ್ಷಿಗಳ ಪರ ಕಾರ್ಯಕರ್ತರ ಹೈ ಡ್ರಾಮಾವೇ ನಡೆದಿದ್ದು ಟಿಕೆಟ್ ಆಕಾಂಕ್ಷಿಗಳ ಪರ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.
ಮೊಳಕಾಲ್ಮೂರು ಕ್ಷೇತ್ರದಿಂದ ಐದಾರು ಬಸ್ ಗಳಲ್ಲಿ ತೆರಳಿದ್ದ ಕಾರ್ಯಕರ್ತರು ಮತ್ತು ಮುಖಂಡರು ಡಾ.ಯೋಗೀಶ್ ಬಾಬುಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಕೂಡಾ ಡಾ.ಯೋಗೀಶ್ ಬಾಬು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.
ಈಗಾಗಲೇ ಕಾಂಗ್ರೆಸ್ ಟಿಕೆಟ್ ಕೈ ತಪ್ಪುವ ಮುನ್ಸೂಚನೆಯಿಂದ ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಕೈ ಪಕ್ಷಕ್ಕೆ ಗುಡ್ ಬೈ ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೆ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣವರು ಕಾಂಗ್ರೆಸ್ ಸೇರಿದ್ದರಿಂದಾಗಿ ಡಾ.ಯೋಗೀಶ್ ಬಾಬುಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆಯೇ ಹೆಚ್ಚಾಗಿದೆ.