i
ಯಡಿಯೂರಪ್ಪ-ಈಶ್ವರಪ್ಪ ಕ್ಷೇತ್ರಗಳ ಶಿವಮೊಗ್ಗದಲ್ಲಿ ಬಿಜೆಪಿಗೆ ಬಿಗ್ ಶಾಕ್…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಬಿ.ಎಸ್.ಯಡಿಯೂರಪ್ಪ ಮತ್ತು ಈಶ್ವರಪ್ಪ ಇವರುಗಳ ತವರು ಜಿಲ್ಲೆಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಬಹಿರಂಗವಾಗಿದೆ. ಸದ್ಯದಲ್ಲೇ ಆಯನೂರು ಮಂಜುನಾಥ್ ಮೇಲ್ಮನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡುವ ಸಾಧ್ಯತೆ ಇದ್ದು ಇದು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸೇರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತವಾಗುತ್ತಿದ್ದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ ಬಿಜೆಪಿಗೆ ಇದರಿಂದ ತೀವ್ರ ಮುಜುಗರ ಆಗಲಿದೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಯನೂರು ಮಂಜುನಾಥ್ ಘೋಷಿಸಿದ್ದು ಶಾಸಕ ಈಶ್ವರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, ಅವರ ಕುಟುಂಬ ಸದಸ್ಯರ ಹಸ್ತಕ್ಷೇಪದಿಂದ ಕಾರ್ಪೊರೇಟರ್ ಗಳು ತತ್ತರಿಸಿ ಹೋಗಿದ್ದಾರೆ.
ಈಶ್ವರಪ್ಪನವರಿಗೆ ಶಕ್ತಿ ಇದ್ದರೆ ತಮ್ಮ ಮಗನನ್ನು ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದು ಸವಾಲು ಹಾಕಿರುವುದು ಬಿಜೆಪಿ ವಲಯದಲ್ಲಿ ಸಾಕಷ್ಟು ಮುಜುಗರ ಉಂಟಾಗಿದೆ.
ಮುಂದುವರೆದು ಮಾತನಾಡಿದ ಆಯನೂರು, ನಾನೂ ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಧೀರ ಶೂರರಂತೆ ಮಾತನಾಡುವ ಈಶ್ವರಪ್ಪನವರಾಗಲಿ ಅಥವಾ ಅವರ ಪುತ್ರನಾಗಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.
ದುರಂಹಕಾರದ ಮಾತುಗಳನ್ನಾಡುವ ಈಶ್ವರಪ್ಪನವರಿಗೆ ಚುನಾವಣೆಯಲ್ಲಿ ಜನ ಬುದ್ದಿ ಕಲಿಸಲಿದ್ದಾರೆಂದು ಎಚ್ಚರಿಸಿದ್ದಾರೆ.