i
ಆಪರೇಷನ್ ಕಮಲದ ಮೂಲಕ ಅಧಿಕಾರ ನಡೆಸುತ್ತಿರುವ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಚುನಾವಣೆಯಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆಪರೇಷನ್ ಕಮಲದ ಕಾರಣಕ್ಕಾಗಿ ಅವರು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಬಿಜೆಪಿಯ ಭ್ರಷ್ಟಾಚಾರಕ್ಕೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿದ್ದಕ್ಕೆ ನಾನು ಪ್ರಾಯಶ್ಚಿತ ಮಾಡಿಕೊಂಡಿದ್ದೇನೆಂದು ಅವರು ಹೇಳಿದರು.
ಭವಿಷ್ಯದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಯಾವುದೇ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರು ಭವಿಷ್ಯ ನುಡಿದರು.