i
ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಮೈಸೂರು ಮೃಗಾಲಯ ವೀಕ್ಷಣೆ ಆರಂಭ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಪ್ರಯುಕ್ತ ವಿದ್ಯಾರ್ಥಿಗಳು, ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರು ಮೃಗಾಲಯವನ್ನು ವೀಕ್ಷಿಸಲು ಅನುಕೂಲವಾಗುವಂತೆ 2023ನೇ ಏಪ್ರಿಲ್ 11ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.