i
ಲೋಕಾಯುಕ್ತ ದಾಳಿ ಲಂಚ ಪಡೆಯುವಾಗ ರೆವಿನ್ಯೂ ಇನ್ಸ್ಪೆಕ್ಟರ್ ಬಂಧನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: lokayukta trap
ಶಿವಮೊಗ್ಗ ಮಹಾನಗರ ಪಾಲಿಕೆಯ ರೆವಿನ್ಯೂ ಇನ್ಸ್ಪೆಕ್ಟರ್ ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ.
ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ಪೀಕರಿಸುವಾಗ ರೆವಿನ್ಯೂ ಇನ್ಸ್ಪೆಕ್ಟರ್ ಆರ್.ಮಂಜುನಾಥ್ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣ ಸಮೇತೆ ಆರೋಪಿಯನ್ನು ಬಂಧಿಸಿದ್ದಾರೆ.
ವಡ್ಡಿನಕೊಪ್ಪ ಗ್ರಾಮದ ಹಾಲೇಶ್ ಎಂಬುವರ ಕಟ್ಟಡ ನಿರ್ಮಾಣಕ್ಕೆ ಎನ್ಒಸಿ ಕೊಡಲು ಆರೋಪಿ ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟು 5 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದೂರು ಆಧರಿಸಿ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ಅವರ ಸೂಚನೆ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.