i
ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸ ಅಥವಾ ಪಕ್ಷದ ಕಚೇರಿಯಲ್ಲಿ ಹಂತ ಹಂತವಾಗಿ ರಾಜ್ಯದ ವಿವಿಧ ಕ್ಷೇತ್ರಗಳ ಅಧಿಕೃತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲಾಗುತ್ತದೆ.
ಇಂದಿನಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ ಶುರುವಾಗಲಿದೆ. ಕಾಂಗ್ರೆಸ್ ನಿಂದ ಈಗಾಗಲೇ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಆ ಪೈಕಿ ಎಲ್ಲ ಅಧಿಕ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈಗಾಗಲೇ ನಾಮಪತ್ರಗಳ ಸಲ್ಲಿಕೆ ಏ.13 ರಿಂದ ಆರಂಭವಾಗಿದ್ದು ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಲಿದ್ದು ಅಭ್ಯರ್ಥಿಗಳಿಗೆ ಬಿ ಫಾರಂ ವಿತರಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.