i
ವಿಷು ಹಬ್ಬಕ್ಕೆ ವಿಶೇಷ ರೈಲುಗಳ ಸಂಚಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಷು ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರುವುಗೊಳಿಸಲು ಬೇಡಿಕೆ ಮೇರೆಗೆ ಕೊಚುವೇಲಿ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳನ್ನು (06083/06084) ಓಡಿಸಲು ದಕ್ಷಿಣ ರೈಲ್ವೆ ವಲಯವು ಸೂಚಿಸಿದೆ. ಈ ರೈಲಿನ ವಿವರ ಕೆಳಗಿನಂತಿದೆ.
ರೈಲು ಸಂಖ್ಯೆ 06083 ಏಪ್ರಿಲ್ 16 ರಂದು ಕೊಚುವೇಲಿ ನಿಲ್ದಾಣದಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ. ಪುನಃ ಇದೇ ರೈಲು (06084) ಏಪ್ರಿಲ್ 17 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 6.50 ಗಂಟೆಗೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ.
ಈ ವಿಶೇಷ ರೈಲು ಎರಡೂ ಮಾರ್ಗದಲ್ಲಿ ಕೊಲ್ಲಂ, ಕಾಯಂಕುಲಂ, ಮಾವೇಲಿಕರ, ಚೆಂಗನ್ನೂರ, ತಿರುವಲ್ಲಾ, ಚೆಂಗನ್ಸೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಅಲುವಾ, ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರ್, ಈರೋಡ್, ಸೇಲಂ, ಓಮಲೂರ್, ಧರ್ಮಪುರಿ ಮತ್ತು ಹೊಸೂರ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿದೆ.
ಈ ವಿಶೇಷ ರೈಲಿನಲ್ಲಿ ಎಸಿ ಟು ಟೈರ್ ಬೋಗಿಗಳು (2), ಎಸಿ ತ್ರಿ ಟೈರ್ ಬೋಗಿಗಳು (8), ಸ್ಲೀಪರ್ ಕ್ಲಾಸ್ ಬೋಗಿಗಳು (7), ಸಾಮಾನ್ಯ ಎರಡನೇ ದರ್ಜೆಯ ಬೋಗಿಗಳು (3), ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್-ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (1) ಮತ್ತು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್ (1) ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತವೆ.
ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ರೈಲ್ವೇ ಇಲಾಖೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನ್ನೇಶ್ ಹೆಗ್ಡೆ ಕೋರಿದ್ದಾರೆ.