i
ಹೆಚ್.ಡಿ.ಕೆ, ಸಿಎಂ ಇಬ್ರಾಹಿಂ ನೇತೃತ್ವದಲ್ಲಿ 19ರಂದು ರಘು ಆಚಾರ್ ನಾಮಪತ್ರ ಸಲ್ಲಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: jds party candidate
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ನೇತೃತ್ವದಲ್ಲಿ 2023ರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಜಿ.ರಘು ಆಚಾರ್ ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಅಂದು ಬುಧವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರಸ್ವಾಮಿ ದೇವಸ್ಥಾನದ ಆವರಣದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತೆರಳಿ ತಾಲೂಕು ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸಿ.ಎಂ ಇಬ್ರಾಹಿಂ ಸೇರಿದಂತೆ ಸ್ಥಳೀಯ ನಾಯಕರುಗಳು ಭಾಗಿಯಾಗಲಿದ್ದಾರೆ. ಜೆಡಿಎಸ್ ಕಾರ್ಯಕರ್ತರು, ಕುಮಾರಣ್ಣ ಅಭಿಮಾನಿಗಳು, ರಘು ಆಚಾರ್ ಬೆಂಬಲಿಗರು, ಅಭಿಮಾನಿಗಳು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಜಿ.ರಘು ಆಚಾರ್ ಮನವಿ ಮಾಡಿದ್ದಾರೆ.