i
ರೈತರುಗಳಿಂದ ತಾಡಪಾಲುಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ವ್ಯಾಪ್ತಿಯ ರೈತರಿಗೆ ೨೦೨೩-೨೪ನೇ ಸಾಲಿನ ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಯೋಜನೆಯಡಿ ತಾಡಪಾಲು ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆಯೆಂದು ಸಹಾಯಕ ಕೃಷಿ ನಿರ್ದೇಶಕಿ ಉಲ್ಫತ್ ಜೈಬಾ.ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನ ಎಲ್ಲಾ ಹೋಬಳಿಯ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ಕಾರ್ಡ್, ಎಫ್.ಐ.ಡಿ ಸಂಖ್ಯೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದ ದಾಖಲಾತಿಗಳೊಂದಿಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಜೇಷ್ಟತೆ ಆಧಾರದ ಮೇಲೆ ರೈತ ಫಲಾನುಭವಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಈ ಹಿಂದೆ ಸೌಲಭ್ಯ ಪಡೆದವರು ಮುಂದಿನ ಮೂರು ವರ್ಷಗಳವರಗೆ ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: ೨೯-೦೪-೨೦೨೩ ಎಂದು ಅವರು ತಿಳಿಸಿದ್ದಾರೆ.