i
ಅಪಾರ ಜನಸಾಗರದೊಂದಿಗೆ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ರಘು ಆಚಾರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಜಿ. ರಘು ಆಚಾರ್ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಚಿತ್ರದುರ್ಗ ನಗರದ ತಾಲೂಕು ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಅಭ್ಯರ್ಥಿ ಜಿ.ರಘು ಆಚಾರ್ ನಾಮಪತ್ರ ಸಲ್ಲಿಸಿದರು.
ನಗರದ ಪ್ರಮುಖ ಮಾರ್ಗಗಳಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರೊಟ್ಟಿಗೆ ಬೃಹತ್ ರೋಡ್ ಶೋ ನಡೆಸಿದರು. ವಿವಿಧ ಕಲಾ ತಂಡಗಳು ಮೆರವಣಿಗೆಯ ಸೊಬಗನ್ನು ಹೆಚ್ಚಿಸಿದ್ದವು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ವಕ್ತಾರ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ವಕೀಲ ಪ್ರತಾಪ್ ಜೋಗಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಕಾರ್ಯಕರ್ತರು ಮತ್ತು ರಘು ಆಚಾರ್ ಅವರ ಅಭಿಮಾನಿಗಳು, ಕಾರ್ಯಕರ್ತರು ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ರೋಡ್ ಶೋ ನಂತರ ರಘು ಆಚಾರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಪತ್ನಿ ಆಶಾ ರಘು ಆಚಾರ್, ಮುಸ್ಲಿಂ ಧಾರ್ಮಿಕ ಧರ್ಮ ಗುರುಗಳೊಟ್ಟಿಗೆ ಜೆಡಿಎಸ್ ಮುಖಂಡರೊಂದಿಗೆ ನಾಮಪತ್ರ ಸಲ್ಲಿಸಿದರು.